ಏ. 14 ರಂದು ಲಾರಿ ಮಾಲೀಕರ ಮುಷ್ಕರ
- Ananthamurthy m Hegde
- Apr 5
- 1 min read
ಬೆಂಗಳೂರು: ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮುಷ್ಕರಕ್ಕೆ ಕರೆ ನೀಡಿದ್ದು 5 ಲಕ್ಷ ಲಾರಿಗಳು ಸಂಚಾರ ನಿಲ್ಲಿಸಲಿವೆ.

ಮುಷ್ಕರಕ್ಕೆ ಯಾರ್ಯಾರ ಬೆಂಬಲ:
* 5 ಲಕ್ಷ ಲಾರಿ ಬಂದ್
* ಏರ್ ಪೋರ್ಟ್ ಟ್ಯಾಕ್ಸಿ ಬಂದ್
* ಗೂಡ್ಸ್ ವಾಹನಗಳು, ಪೆಟ್ರೋಲ್ ಡಿಸೇಲ್ ಲಾರಿ ಬಂದ್
* ಜಲ್ಲಿಕಲ್ಲು, ಮರಳು ಲಾರಿ ಬಂದ್
* ಚಾಲಕರ ಸಂಘದಿಂದ ಬಂದ್