ಜ.೪ ಕ್ಕೆ ಭಗವದ್ಗೀತಾ ಅಭಿಯಾನ ಸಮರ್ಪಣಾ ಸಮಾರಂಭ
- Ananthamurthy m Hegde
- Jan 1
- 1 min read
ಯಲ್ಲಾಪುರ : ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ, ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ,ತಾಲೂಕಾ ಭಗವದ್ಗೀತಾ ಅಭಿಯಾನ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹುಲ್ಲೋರಮನೆಯ ಗಜಾನನ-ಮಾರುತಿ ದೇವಾಲಯದ ಆವರಣದಲ್ಲಿ ಜ.೪ ರಂದು ಮಧ್ಯಾಹ್ನ ೨.೩೦ ಕ್ಕೆ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಸಮರ್ಪಣಾ ಸಮಾರಂಭ ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಅಭಿಯಾನ ಸಮಿತಿಯ ತಾಲೂಕಾಧ್ಯಕ್ಷ ಗಣಪತಿ ಭಟ್ಟ ಹೇಳಿದರು.
ಅವರು ಈ ಕುರಿತು ಬುಧವಾರ ಮಾಹಿತಿ ನೀಡಿ,ಗೀತಾ ಅಭಿಯಾನ ಜಿಲ್ಲಾದ್ಯಂತ ಯಶಸ್ವಿಯಾಗಿ ಒಟ್ಟೂ ೮೦೦ ಕೇಂದ್ರಗಳಲ್ಲಿ ಸಂಪನ್ನಗೊಂಡಿದೆ. ಯಲ್ಲಾಪುರದ ೪೦೦ ಕೇಂದ್ರಗಳಲ್ಲಿ ಅಭಿಯಾನ ನಡೆದಿದೆ ಎಂದರು.
ಸಮರ್ಪಣಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸುವ ಮಠಾಧೀಶರನ್ನು ಮಾಗೋಡು ಕ್ರಾಸ್‌ನಿಂದ ದೇವಾಲಯದವರೆಗೆ ಮೆರವಣಿಗೆ ನಡೆಸಿ, ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗುವುದು. ಸಾವಿರಾರು ಜನರು ಏಕಕಂಠದಿಂದ ಭಗವದ್ಗೀತೆಯನ್ನು ಪಠಿಸಲಿದ್ದಾರೆ ಎಂದರು.
ಸ್ವರ್ಣವಲ್ಲಿಮಠದ ಹಿರಿಯ ಹಾಗೂ ಕಿರಿಯ ಯತಿಗಳು ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿಯವರು ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ, ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾಧ್ಯಕ್ಷ ಮುರಳೀಧರ ಪ್ರಭು, ಸ್ವರ್ಣವಲ್ಲೀ ಮಠದ ಅಧ್ಯಕ್ಷ ವಿಘ್ನೇಶ್ವರ ಹೆಗಡೆ ಬೊಮ್ಮನಳ್ಳಿ, ಹಾಗೂ ಗಣ್ಯರು ಭಾಗವಹಿಸುತ್ತಾರೆ ಎಂದರು.
ಭಗವದ್ಗೀತಾ ಸಮಿತಿಯ ಪ್ರಮುಖರಾದ ಶಂಕರ ಭಟ್ಟ ಬಾಲೀಗದ್ದೆ, ಶಂಕರ ಭಟ್ಟ ಕೆ.ಜಿ.ಬೋಡೆ ಇದ್ದರು.
Comments