ಪಾಸಿಟಿವ್ ಸುದ್ದಿ: ಒಂದೇ ಕುಟುಂಬದ 18 ಮಂದಿ ಕೋವಿಡ್‌ನಿಂದ ಗುಣಮುಖ
- Oct 21, 2024
- 1 min read
Updated: Oct 22, 2024
ಶಿರಸಿ, ಮೇ 25: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಸರಕುಳಿ ಗ್ರಾಮದ ಒಂದೇ ಕುಟುಂಬದ 18 ಮಂದಿಗೆ ಕೋವಿಡ್ ಸೋಂಕು ತಗುಲಿದ್ದರೂ, ಆತ್ಮಸ್ಥೆರ್ಯ ಹಾಗೂ ಒಗ್ಗಟ್ಟಿನಿಂದ ಪರಿಸ್ಥಿತಿಯನ್ನು ಎದುರಿಸಿ ಎಲ್ಲರೂ ಗುಣಮುಖರಾಗಿ ಇದೀಗ ಸಂತಸವನ್ನೂ ಹಂಚಿಕೊಂಡಿದ್ದಾರೆ
ಯಾರೂ ಧೃತಿಗೆಡದೆ ಒಗ್ಗಟ್ಟಿನಿಂದ ಸರ್ಕಾರದ ಹಾಗೂ ವೈದ್ಯಕೀಯ ನಿಯಮಗಳನ್ನು ಪಾಲಿಸಿ ಮನೆಯಲ್ಲಿಯೇ ಅಗತ್ಯವಿರುವ ಚಿಕಿತ್ಸೆ ಪಡೆದು ತಾವುಗಳೂ ಗುಣಮುಖರಾಗಿ, ಸೋಂಕು ಊರಿನಲ್ಲಿ ಹರಡದಂತೆ ಜಾಗ್ರತೆ ವಹಿಸಿರುವುದು ಇಂದಿಗೂ ಮುಂದುವರೆದಿರುವ ಅವಿಭಕ್ತ ಕುಟುಂಬಗಳ ಒಗ್ಗಟ್ಟು ಹಾಗೂ ಸಾಮಾಜಿಕ ಕಳಕಳಿಗೆ ಸಾಕ್ಷಿಯಾಗಿದೆ.

ಸರಕುಳಿ ಗ್ರಾಮದ ಲೋಕೇಶ್ವರ ಹೆಗಡೆಯವರ ಮನೆಯಲ್ಲಿ ಒಬ್ಬರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿತ್ತು. ಸುಮಾರು 3 ವರ್ಷದಿಂದ 70 ವರ್ಷದ ಎಲ್ಲ ವಯೋಮಾನದವರಿರುವ ಈ ಕುಟುಂಬದಲ್ಲಿ ಎಲ್ಲರೂ ಸ್ವಯಂ ಪ್ರೇರಣೆಯಿಂದ ಕೋವಿಡ್ ಪರೀಕ್ಷೆ ಮಾಡಿಸಿದಾಗ ಉಳಿದ 17 ಜನರಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು.
Commentaires