ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ೭ ವಿದ್ಯಾರ್ಥಿನಿಯರು : ಓರ್ವ ವಿದ್ಯಾರ್ಥಿನಿ ಸಾವು , ೩ ವಿದ್ಯಾರ್ಥಿಗಳು ಕಣ್ಮರೆ
- Ananthamurthy m Hegde
- Dec 11, 2024
- 1 min read
ಭಟ್ಕಳ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಮುರುಡೇಶ್ವರಕ್ಕೆ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೂವರು ನಾಪತ್ತೆಯಾಗಿದ್ದು. ಇದೆ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದ್ದು ಅವರನ್ನು ಮುರುಡೇಶ್ವರ ಆರ್.ಎನ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ವಿದ್ಯಾರ್ಥಿನಿ ಕೋಲಾರ ಮುಳಬಾಗಿಲಿನ ಶ್ರವಂತಿ ಗೋಪಾಲಪ್ಪ (15) ಎಂದು ಎಂದು ತಿಳಿದು ಬಂದಿದೆ. ಆರ್.ಎನ್. ಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ರಕ್ಷಣೆಯಾದ ವಿದ್ಯಾರ್ಥಿನಿಯರನ್ನು ಯಶೋದಾ (15) ವೀಕ್ಷಣಾ (15) ಹಾಗೂ ಲಿಪಿಕಾ (15) ಎಂದು ಗುರುತಿಸಲಾಗಿದೆ. ಕಣ್ಮರೆಯಾದ ವಿದ್ಯಾರ್ಥಿನಿಯರು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ತಿಳಿದು ಬಂದಿದ್ದು. ಮುರ್ಡೇಶ್ವರ ಪಿಎಸ್‌ಐ ಹಣಮಂತ ಬಿರಾದಾರ ಅವರ ನೇತೃತ್ವದಲ್ಲಿ ಕರಾವಳಿ ಪೊಲೀಸ್ ಪಡೆ ಕಣ್ಮರೆಯಾದವರ ಹುಡುಕಾಟ ಆರಂಭಿಸಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಟ್ಟು ೪೬ ವಿದ್ಯಾರ್ಥಿಗಳು ಮುರುಡೇಶ್ವರಕ್ಕೆ ಮಂಗಳವಾರ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದು. ದೇವರ ದರ್ಶನ ಮುಗಿಸಿ ಬಳಿಕ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಸಮುದ್ರದ ಅಲೆಗೆ 7 ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದಾರೆ. ಅವರಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದರೆ. ಮೂವರು ಕಣ್ಮರೆಯಾಗಿದ್ದಾರೆ ಹಾಗೂ ಮೂವರ ರಕ್ಷಣೆ ಮಾಡಲಾಗಿದ್ದು ಅವರರನ್ನು ಸದ್ಯ ಮುರುಡೇಶ್ವರ ಆರ್.ಎನ್. ಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸಹಾಯಕ ಆಯುಕ್ತೆ ಡಾ. ನಯನಾ ಎನ್. ಹಾಗೂ ತಹಸೀಲ್ದಾರ್ ಅಶೋಕ ಭಟ್ಟ ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಗೆ ಭೇಟಿ ನೀಡಿ ತೀವ್ರ ಅಸ್ವಸ್ಥಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಹಾಗೂ ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ಶಿಕ್ಷಕರಲ್ಲಿ ಉಳಿದ ವಿದ್ಯಾರ್ಥಿಗಳ ಕುರಿತು ಮಾಹಿತಿ ಕಲೆ ಹಾಕಿ ಅವರಿಗೆಲ್ಲರಿಗೂ ರಾತ್ರಿ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.
Comentarios