ಯುಎಸ್ ಚುನಾವಣೆಗೆ ದಿನಗಣನೆ : ಟ್ರಂಪ್ ಕಮಲಾ ಹ್ಯಾರಿಸ್ ನಡುವೆ ಭರ್ಜರಿ ಪೈಪೋಟಿ
- Ananthamurthy m Hegde
- Nov 3, 2024
- 1 min read

ಯುಎಸ್ ಚುನಾವಣೆಗೆ ದಿನಗಣನೆ ಶುರುವಾಗಿದೆ. ನವೆಂಬರ್ ೫ ರಂದು ಯುಎಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ನಡುವೆ ಗೆಲುವು ಯಾರಿಗೆ ಎನ್ನುವ ಚರ್ಚೆಗಳು ಶುರುವಾಗಿದೆ. ಈ ಬಾರಿ ಯುಎಸ್ ಚುನಾವಣೆ ಹಲವು ಕಾರಣಗಳಿಂದ ಭಾರಿ ಕುತೂಹಲ ಕೆರಳಿಸಿದೆ. ಯಾರು ಗೆಲುವು ಸಾಧಿಸಬಹುದು ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಾಗುತ್ತಿಲ್ಲ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ಸಾಕಷ್ಟು ಭದ್ರತೆ ನಡುವೆಯೂ ಟ್ರಂಪ್ ಮೇಲೆ ಹತ್ಯಾ ಪ್ರಯತ್ನ ನಡೆದಿತ್ತು. ಜುಲೈ ೧೩ರಂದು ಪೆನ್ಸಿಲ್ವೇನಿಯಾದಲ್ಲಿ ಟ್ರಂಪ್ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಲಾಗಿತ್ತು, ಅದೃಷ್ಟವಶಾತ್ ಗುಂಡು ಟ್ರಂಪ್‌ರ ಕಿವಿಯನ್ನು ತಾಗಿ ಹೋಗಿತ್ತು, ತಕ್ಷಣವೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಟ್ರಂಪ್‌ರನ್ನು ಸುತ್ತುವರೆದು ರಕ್ಷಣೆ ಮಾಡಿದ್ದರು.
ಮೇ.೩೦ ರಂದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು ಭಾರಿ ಸುದ್ದಿಯಾಗಿತ್ತು. ಟ್ರಂಪ್ ಅಪರಾಧಗಳಿಗೆ ಶಿಕ್ಷೆಗೊಳಗಾದ ಮೊದಲ ಮಾಜಿ ಯುಎಸ್ ಅಧ್ಯಕ್ಷರು ಎನಿಸಿಕೊಂಡಿದ್ದಾರೆ.
ಯುಎಸ್ ಕಾನೂನಿನ ಪ್ರಕಾರ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ಕೊಟ್ಟರೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲು ಅವಕಾಶವಿದೆ. ಟ್ರಂಪ್ ಮೇಲೆ ಇನ್ನೂ ಮೂರು ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದರೂ, ಅವರಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ವ್ಯಾಪಕ ಬೆಂಬಲ ಸಿಕ್ಕಿದೆ.
Commentaires