top of page

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾ ಸಂಸ್ಥೆ ಜೊತೆಗೆ ಕ್ರೆಡಲ್ ಒಪ್ಪಂದ

  • Writer: new waves technology
    new waves technology
  • Oct 22, 2024
  • 1 min read

ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.












ಬೆಂಗಳೂರು: ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‍ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

ಶುದ್ಧ ಇಂಧನ ಮತ್ತು ಹಸಿರು ಹೈಡ್ರೋಜನ್ ಉಪಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಆಸ್ಟ್ರೇಲಿಯಾ ಒಟ್ಟಾಗಿ ಕೆಲಸ ಮಾಡಲು ಬದ್ಧವಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ಕಂಪನಿಗಳ ಜತೆಗಿನ ಕರ್ನಾಟಕದ ಸಂಪರ್ಕ ಸಲಭವಾಗುವ ಜತೆಗೆ ಹೂಡಿಕೆ ಅವಕಾಶಗಳು ಹೆಚ್ಚಲಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಉತ್ತೇಜನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ರಾಜ್ಯದ ಕೈಗಾರಿಕಾ ನೀತಿಗೆ ಅನುಗುಣವಾಗಿ ಯೋಜನೆಗಳಿಗೆ ಪ್ರೊತ್ಸಾಹಕಗಳನ್ನು ಒದಗಿಸಿದ್ದೇವೆ. ಈ ಕ್ರಮಗಳಿಂದಾಗಿ ಕರ್ನಾಟಕವು ಹೂಡಿಕೆಗೆ ಆದ್ಯತೆಯ ತಾಣವಾಗಿದೆ ಎಂದು ಇಂಧನೆ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದ್ದಾರೆ.

ಈ ಒಪ್ಪಂದವು ತಂತ್ರಜ್ಞಾನ ವರ್ಗಾವಣೆ ಮತ್ತು ಸಹಯೋಗವನ್ನು ಸುಗಮಗೊಳಿಸುವುದಲ್ಲದೆ, ಈ ವಲಯಗಳಲ್ಲಿ ಪರಸ್ಪರ ಹಿತಾಸಕ್ತಿಗಳನ್ನು ಬೆಂಬಲಿಸುವ ದ್ವಿಪಕ್ಷೀಯ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುತ್ತದೆ ಮತ್ತು ಶುದ್ಧ ಇಂಧನ, ನವೀಕರಿಸಬಹುದಾದ ಮತ್ತು ಗ್ರೀನ್ ಹೈಡ್ರೋಜನ್‌ನಲ್ಲಿ ವಾಣಿಜ್ಯೀಕರಣದ ನಿರೀಕ್ಷೆಗಳನ್ನು ಗುರುತಿಸುತ್ತದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ತಿಳಿಸಿದರು.

ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್ ಸ್ಟೋರೇಜ್ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ.

Comments


Top Stories

bottom of page